ಭಾರತ, ಮೇ 22 -- ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2023-24 ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ, ವಿದ್ವಾಂಸರಾಗಿರುವ ಡಾ.ರಮಾನಂದ ಬನಾರಿ, ಕಾಸರಗೋಡು, ಹಿರಿಯ ಯಕ್ಷಗಾನ ಕಲಾವಿದರೂ ಆಗಿರುವ ವಿದ್ವಾಂಸ ಪ್ರೊ.ಎಂಎಲ್ ಸಾಮಗ, ಉಡುಪಿ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಅವರು ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, ಪತ್ರಕರ್ತ ಶಿರಸಿಯ ಅಶೋಕ ಹಾಸ್ಯಗಾರ ಅವರ 'ದಶರೂಪಕಗಳ ದಶಾವತಾರ' ಕೃತಿಯು ಆಯ್ಕೆಯಾಗಿದೆ.
ಯಕ್ಷಮಂಗಳ ಪ್ರಶಸ್ತಿಯು 25,000 ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು 10,000 ರೂ ನಗದು, ಪ್ರಶಸ್ತಿ, ಸ್ಮರಣಿಕೆಗಳನ್ನೊಳಗೊಂಡಿದೆ. ಜಾನಪದ ವಿದ್ವಾಂಸರಾದ ಡಾ.ಕೆ ಚಿನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರೊ ಪಾದೆಕಲ್ಲು ವಿಷ್ಣುಭಟ್, ಯಕ್ಷಗಾನ ಸಂಘಟಕ ಮುರಲೀ ಕಡೇಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.