ಭಾರತ, ಫೆಬ್ರವರಿ 18 -- Mangaluru Crime: ಮಂಗಳೂರು ಸಿಸಿಬಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ 119 ಕೆ ಜಿ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್(38), ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33) ಮತ್ತು ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ಜೀವನ್ ಸಿಂಗ್(35) ಬಂಧಿತರು.

ಆರೋಪಿಗಳಿಂದ ಅಂಧ್ರಪ್ರದೇಶ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಕಾರಿನಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 119 ಕೆ ಜಿ ಗಾಂಜಾವನ್ನು ವಶಪಡಿಸಿಕೊಂಡು ,ನಾಲ್ವರು‌ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು

ಫೆ. 17 ರಂದು ಮಂಗಳೂರು ನಗರಕ್ಕೆ ಅಂಧ್ರಪ್ರದೇಶದಿಂದ ಗೂಡ್ಸ್‌ ಟೆಂಪೋ ವಾಹನದಲ್ಲಿ ಹಾಗೂ ಕಾರಿನಲ...