ಭಾರತ, ಜೂನ್ 3 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಯರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಜಪೆ ನಿವಾಸಿ ಅಬ್ದುಲ್ ರಜಾಕ್ (59) ಎಂಬಾತನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಈತನು ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿರುತ್ತಾನೆ ಎಂದು ದೂರಲಾಗಿದೆ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.