Mangalore, ಮೇ 3 -- ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಪೊಲೀಸ್ ಕಸ್ಡಡಿಗೆ ತೆಗೆದುಕೊಳ್ಳಲಾಗಿದೆ. ಯಾವ ಕಾರಣಕ್ಕೆ ಅವರು ಹತ್ಯೆ ಮಾಡಿದರು ಎಂಬ ಕುರಿತು ತನಿಖೆ ನಡೆಸಲಾಗುತ್ತದೆ ಎಂದು ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಹೇಳಿದ್ದಾರೆ. ಈ ಕುರಿತು ಗೃಹ ಸಚಿವ ಡಾ.ಪರಮೇಶ್ವರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿಯೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅನುಪಮ್ ಅಗರವಾಲ್, ಘಟನೆ ನಡೆದ ಬಳಿಕ ಅವರು ಅಡಗಿಕೊಳ್ಳಲು ಯತ್ನಿಸಿದ್ದರು, ವಾಹನ ಸಂಖ್ಯೆ ಹಾಗು ಸಿಸಿಟಿವಿ ಮಾಹಿತಿ ಆಧರಿಸಿ ಹಾಗೂ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಅವರನ್ನು ಪತ್ತೆ ಹಚ್ಚಲಾಗಿದೆ ಎಂದರು. ಮಹಿಳೆಯರ ಪಾತ್ರದ ಕುರಿತೂ ತನಿಖೆ ನಡೆಸಲಾಗುತ್ತಿದ್ದು, ಇಷ್ಟರವರೆಗಿನ ಮಾಹಿತಿಯಂತೆ ಈ ಕೃತ್ಯದಲ್ಲಿ 10 ಮಂದಿ ಪಾಲ್ಗೊಂಡಿರುವುದು ಖಚಿತಪಟ್ಟಿದೆ. ಇನ್ನೂ ಇಬ್ಬರ ಸೆರೆ ಬಾಕಿ ಇದೆ, ಇನ್ನಷ್ಟು ಮಂದಿ ಕೃತ್ಯದ ಹಿಂದಿದ್ದಾರೆಯೇ ಎಂಬುದರ ಕುರಿತು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.