ಭಾರತ, ಏಪ್ರಿಲ್ 30 -- ಮಂಗಳೂರು: ಕಾರ್ಮಿಕನೋರ್ವನನ್ನು ಗುಂಪೊಂದು ಮನಸೋ ಇಚ್ಛೆ ಹಲ್ಲೆ ನಡೆಸಿ, ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಶಾಂತಿ ಕದಡುವ ಕೃತ್ಯವಾಗಿದೆ ಎಂದಿದ್ದಾರೆ.

ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಅಪರಿಚಿತ ಶವ ಸಿಕ್ಕಿದ್ದು, ಅದರ ತನಿಖೆ ನಡೆಸಿದಾಗ ಈ ಕೃತ್ಯ ಹೊರಬಂದಿದೆ. ತನಿಖೆ ನಡೆಸಿದ ಪೊಲೀಸರು ವ್ಯಕ್ತಿಯನ್ನು 30 ಮಂದಿಯ ತಂಡ ಕ್ಷುಲಕ ಕಾರಣಕ್ಕಾಗಿ ವ್ಯಕ್ತಿಹಯೊಬ್ಬನನ್ನು ಹಲ್ಲೆಗೈದು ಹತ್ಯೆ ಮಾಡಿದೆ ಎಂಬುದನ್ನು ದೃಢಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಮಂದಿಯನ್ನು ಆರೋಪಿಗಳು ಎಂದು ಗುರುತಿಸಿದ್ದು, ಇವರಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ.

ಕೇರಳ ಮೂಲದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಅಶ್ರಫ್ ಹತ್ಯೆಗೀಡಾದ ವ್ಯಕ್ತಿ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮಂಗಳೂರಿನಲ್ಲಿ...