ಭಾರತ, ಮಾರ್ಚ್ 17 -- ಮಂಡ್ಯ: ವಿಷಾಹಾರ ಸೇವಿಸಿರುವ ಕಾರಣದಿಂದ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿ, 28ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಸೇರಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯದ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ವಸತಿಶಾಲೆಯಲ್ಲಿ ಹೋಳಿ ಪಾರ್ಟಿಯ ಊಟ ಸೇವಿಸಿದ್ದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಮೇಘಾಲಯ ಮೂಲದ ಕೇರ್ಲಾಂಗ್‌ (13) ಎನ್ನುವ ವಿದ್ಯಾರ್ಥಿ ಫುಡ್‌ ಪಾಯಿಸನ್ಸ್‌ನಿಂದಾಗಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತನಾಗಿದ್ದಾನೆ. 28 ಮಂದಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಸತಿ ಶಾಲೆಯಲ್ಲಿ ವಿಷಾಹಾರ ಸೇವನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದಲ್ಲಿರುವ ಗೋಕುಲ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ಹೋಳಿ ಆಚರಣೆಯ ಸಂಬಂಧ ತಯಾರಿಸಿದ್ದ ಆಹಾರ ಸೇವಿಸಿದ ನಂತರ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿತ್ತು. ಕೆಲವು ಮಕ್ಕಳಿಗೆ ವಾಂತಿ, ಬೇಧಿ ಕೂಡ ಕಾಣಿಸಿತ್ತು. ...