ಭಾರತ, ಮಾರ್ಚ್ 3 -- ಶ್ರೀರಾಘವೇಂದ್ರ ಸ್ವಾಮಿಗಳ 404ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 430ನೇ ವರ್ಧಂತಿ ಉತ್ಸವದ ಅಂಗವಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಶನಿವಾರದಿಂದ (ಮಾರ್ಚ್ 1) ಗುರುವೈಭವೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಈ ಕಾರ್ಯಕ್ರಮವು ಮಾರ್ಚ್ 6ರ ವರೆಗೆ ನಡೆಯಲಿದೆ.

ಗುರುವೈಭವೋತ್ಸವ ಅಂಗವಾಗಿ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆಗಳ ಪಟ್ಟಾಭಿಷೇಕ ಮಹೋತ್ಸವ ಹಾಗೂ ರಾಯರ ರಥೋತ್ಸವ ಜರುಗಿತು. ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಥೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀರಾಘವೇಂದ್ರ ಸ್ವಾಮಿಗಳ ಪ್ರತಿಮೆಯ ಮುಂದೆ ಪಾದುಕೆಗಳನ್ನು ಇರಿಸಿ ಭಕ್ತಿಭಾವದಿಂದ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಸುಬುಧೇಂದ್ರ ತೀರ್ಥರು ಸೇರಿದಂತೆ ಹಲವರು ಭಾಗವಹಿಸಿದ್ದರು.

ಫಲ-ಪುಷ್ಪಗಳಿಂದ ಅಲಂಕೃತವಾದ ಶ್ರೀರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ಸುಬುಧೇಂದ್ರ ತೀರ್ಥರು ಹೂಗಳನ್ನು ಅರ್ಪಿಸುತ್ತಿರುವ ದೃಶ್ಯವನ್ನು ಇಲ್ಲಿ ಕಾಣಬಹುದು.

ಶ್ರೀರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ಸುಬುಧೇಂದ್ರ ತೀರ್ಥ...