Bengaluru, ಜೂನ್ 27 -- ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಮಕ್ಕಳ ಚಿತ್ರ 'ಲಕ್ಷ್ಯ' ತೆರೆಗೆ ಬರಲು ಸಿದ್ದವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ 'ಲಕ್ಷ್ಯ' ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.

1990ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ತಯಾರಾದ 'ಲಕ್ಷ್ಯ' ಚಿತ್ರಕ್ಕೆ ಉತ್ತರ ಕರ್ನಾಟಕ ಮೂಲದ ಅರ್ಜುನ ಪಿ. ಡೊಣೂರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ 'ಲಕ್ಷ್ಯ' ಚಿತ್ರದ ಟ್ರೇಲರ್ ಮತ್ತು ಹಾಡುಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಲಹರಿ ವೇಲು, ಸುನೀಲ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ 'ಲಕ್ಷ್ಯ' ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆಯಾದವು.

'ಲಕ್ಷ್ಯ' ಚಿತ್ರದ ಟ್ರೇಲರ್ ಮತ್ತು ಆಡಿಯೋ ಬಿಡುಗಡೆ ಬಳಿಕ ಮಾತನಾಡ...