ಭಾರತ, ಜೂನ್ 19 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 20 ರ ಶುಕ್ರವಾರದಿಂದ 26ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಜೀವನದಲ್ಲಿ ಗೆಲ್ಲುವ ಹಠ ನಿಮ್ಮಲ್ಲಿರುತ್ತದೆ. ಪತಿಯ ಜೊತೆಯಲ್ಲಿ ಉತ್ತಮ ಒಡನಾಟ ಇರುತ್ತದೆ. ಸ್ವಂತ ಅವಶ್ಯಕತೆ ಪೂರೈಸಲು ಹೆಚ್ಚಿನ ಹಣ ಬೇಕಾಗುತ್ತದೆ. ಬುದ್ಧಿವಂತರಾದರು ಸಮಯಕ್ಕೆ ತಕ್ಕಂತೆ ವರ್ತಿಸಲು ಸಾಧ್ಯವಾಗುವುದಿಲ್ಲ. ಕುಟುಂಬದ ವಿಚಾರದಲ್ಲಿ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲು ಸಫಲರಾಗುವಿರಿ. ವಿದ್ಯಾರ್ಥಿಗಳು ಸಾಧನೆಗೆ ಎಲ್ಲರ ಪ್ರಶಂಸ...