ಭಾರತ, ಏಪ್ರಿಲ್ 16 -- ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ಕಿಶನ್‌ನನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಚ್ಚು ಹಿಡಿದು ರೀಲ್ಸ್‌ ಮಾಡಿದ್ದ ಆರೋಪದಡಿ ರಜತ್‌ಗೆ ಪೊಲೀಸರು ನೋಟಿಸ್‌ ನೀಡಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಈತನನ್ನು ಬಂಧಿಸಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ರಜತ್‌ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ನ್ಯಾಯಾಲಯವು ರಜತ್‌ ಮತ್ತು ವಿನಯ್‌ಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಪ್ರತಿ ವಿಚಾರಣೆಗೂ ಹಾಜರಾಗುವಂತೆ ಷರತ್ತು ವಿಧಿಸಲಾಗಿದ್ದರು, ಇವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ, ಆರೋಪಿ ರಜತ್‌ ವಿರುದ್ಧ ಜಾಮೀನುರಹಿತ ವಾರೆಂಟ್‌ ಹೊರಡಿಸಲಾಗಿತ್ತು. ಇಂದು ಮಧ್ಯಾಹ್ನ ಒಂದು ಗಂಟೆಗೆ ಇವರನ್ನು ಕೋರ್ಟ್‌ ಮಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಬಿಗ್‌ಬಾಸ್‌ ಕನ್ನಡದ ಮಾಜಿ ಸ್ಪರ್ಧಿಗಳಾದ ರಜತ್‌ ಕಿಶನ್‌ ಮತ್ತು ವಿನಯ್‌ ಗೌಡರಿಗೆ 24ನೇ ಎಸಿಎಂಎಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು. ಇವರಿಬ್ಬರ ಮೇಲೆ ಶಸ್ತ್ರಾಸ್ತ್ರ ಕಾಯಿದ...