ಭಾರತ, ಫೆಬ್ರವರಿ 13 -- ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಾಲ್ಕು ದಿನಗಳ ನಂತರ, ಇಂದು (ಫೆ.13ರ ಗುರುವಾರ) ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಿದೆ. ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಿಂದ 250ಕ್ಕೂ ಹೆಚ್ಚು ಜನರ ಸಾವನ್ನಪ್ಪಿದ್ದರು. ಸಾವಿರಾರು ಜನರು ಸ್ಥಳಾಂತರಗೊಂಡರು. ಅದಾದ 21 ತಿಂಗಳ ನಂತರ ಸಿಂಗ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದೀಗ ಮಣಿಪುರ ರಾಜ್ಯದಲ್ಲಿ ಸರ್ಕಾರ ಆಡಳಿತದಲ್ಲಿ ಮುಂದುವರೆಯಲು ಆಗುವುದಿಲ್ಲ. ಹೀಗಾಗಿ ರಾಷ್ಟ್ರಪತಿ ಆಡಳಿತ ಜಾರಿಯಾಗಿದೆ.

ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಪ್ರಕಾರ, "ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ ಆ ರಾಜ್ಯದ ಸರ್ಕಾರ ಆಡಳಿತ ನಡೆಸಲು ಸಾಧ್ಯವಿಲ್ಲದ ಪರಿಸ್ಥಿತಿ ಉದ್ಭವಿಸಿದೆ" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟಿದ್ದಾರೆ.

"ಆದ್ದರಿಂದ, ಈಗ ಸಂವಿಧಾನದ 356ನೇ ವಿಧಿಯಲ್ಲಿ ನೀಡಲಾದ ಅಧಿಕಾರಗಳನ್ನು ಮತ್ತು ಆ ನಿಟ್ಟಿನಲ್ಲಿ ನನಗೆ ಅನುವು ಮಾಡಿಕೊಡುವ ಇತರ ಎಲ್ಲಾ ಅಧಿಕಾರಗಳನ್ನು ಚಲಾಯಿ...