Madhya pradesh, ಏಪ್ರಿಲ್ 19 -- ಮೂರು ವರ್ಷದ ಹಿಂದೆ ಭಾರತಕ್ಕೆ ವಿದೇಶದಿಂದ ಬಂದ ಚೀತಾಗಳು ಈಗ ಬದುಕು ಕಂಡುಕೊಂಡಿವೆ. ಮಧ್ಯಪ್ರದೇಶದ ಕುನ್ಹೋ ರಾಷ್ಟ್ರೀಯ ಉದ್ಯಾನದಲ್ಲಿ ಏಳು ಬೀಳಿನ ನಡುವೆಯೇ ಚೀತಾ ಪುನರುತ್ಥಾನ ಯೋಜನೆ ಪ್ರಗತಿ ಹಾದಿಯಲ್ಲಿದೆ. ಈಗ ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸಲು ಕೇಂದ್ರ ಅರಣ್ಯ, ಪರಿಸರ ಇಲಾಖೆಯು ಮುಂದಾಗಿದೆ. ಮಧ್ಯಪ್ರದೇಶ ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಯೋಜನೆ ವಿಸ್ತರಣೆಯಾಗಲಿದೆ. ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾದಿಂದ ಎಂಟು ಚೀತಾಗಳನ್ನು ಎರಡು ಹಂತಗಳಲ್ಲಿ ಭಾರತಕ್ಕೆ ತರಲಾಗುವುದು. ಇದರಲ್ಲಿ ಮೇ ವೇಳೆಗೆ ನಾಲ್ಕು ಚೀತಾಗಳು ಆಗಮಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಉಪಸ್ಥಿತಿಯಲ್ಲಿ ಚೀತಾ ಯೋಜನೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ ಎಂದು ಮಧ್ಯಪ್ರದ...