ಭಾರತ, ಮಾರ್ಚ್ 9 -- 2025ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೈದಾನಕ್ಕಿಳಿದ ಬೆನ್ನಲ್ಲೇ ಟೀಮ್ ಇಂಡಿಯಾ ಸೂಪರ್​ಸ್ಟಾರ್​ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ.

2008ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ವಿರಾಟ್, ಮೂರು ಕ್ರಿಕೆಟ್ ಸ್ವರೂಪಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದವರಲ್ಲಿ ಒಬ್ಬರು. 2024ರಲ್ಲಿ ಟಿ20ಐ ಕ್ರಿಕೆಟ್​ಗೆ ನಿವೃತ್ತಿ ಹೊಂದಿದ್ದರೂ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರನಾಗಿದ್ದಾರೆ.

ವಿರಾಟ್ ಸತತ ಮೂರನೇ ಚಾಂಪಿಯನ್ಸ್ ಟ್ರೋಫಿ ಫೈನಲ್ ಆಡುತ್ತಿದ್ದಾರೆ. 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆಲುವಿನಲ್ಲಿ ವಿರಾಟ್ ಭಾರತದ ಸ್ಟಾರ್ ಪರ್ಫಾರ್ಮರ್ ಆಗಿದ್ದರು. ವಿರಾಟ್ ನೇತೃತ್ವದ ಭಾರತ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಸೋತಿತ್ತು..

ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಬೃಹತ್ ಮೈಲಿಗಲ್ಲು ನೆಟ್ಟಿದ ಕೊಹ್ಲಿ, ಸಚಿನ್ ತೆಂಡೂಲ್ಕರ್​ ಕ್ಲಬ್ ಸೇರಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550...