Bengaluru, ಏಪ್ರಿಲ್ 18 -- ಗುಂಡ (ನಾಯಿ) ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆ ಇಟ್ಟುಕೊಂಡು ನಿರ್ಮಿಸಿದ್ದ ನಾನು ಮತ್ತು ಗುಂಡ ಚಿತ್ರ ಎರಡೂವರೆ ವರ್ಷಗಳ ಹಿಂದೆ ತೆರೆಕಂಡು ಜನಮನ ಸೂರೆಗೊಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘು ಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾದ ʻನಾನು ಮತ್ತು ಗುಂಡ -2 ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ಕೆಜಿಎಫ್ ಖ್ಯಾತಿಯ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ, ನಿರ್ದೇಶಕ ರಘು ಹಾಸನ್, ರಾಕೇಶ್ ಈ ಚಿತ್ರದಲ್ಲಿ ಶಿವರಾಜ್ ಅವರ ಮಗನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ರೆಡಿಯಾಗಿದ್ದು, ಸದ್ಯದಲ್ಲೇ ಸೆನ್ಸಾರ್ಗೆ ಹೋಗಲಿದೆ. ಮೊದಲ ಭಾಗ ಮಾಡುವಾಗಲೇ 2ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್ ಕನ್ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಊಟಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.