Bangalore, ಮಾರ್ಚ್ 21 -- ಬೆಂಗಳೂರು:ಮಧುಬಲೆ( ಹನಿ ಟ್ರ್ಯಾಪ್) ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದರು. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು .

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆ...