Mangaluru, ಏಪ್ರಿಲ್ 3 -- Madhur Mahamoodappa: ಮಾರ್ಚ್ 27ರಿಂದ ಆರಂಭಗೊಂಡು, ಏಪ್ರಿಲ್ 7ರವರೆಗೆ ಕಾಸರಗೋಡು ಜಿಲ್ಲೆಯ ಪ್ರಸಿದ್ದ ಪುಣ್ಯಕ್ಷೇತ್ರವಾದ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯುತ್ತಿದೆ. ಈಗಾಗಲೇ ಸಹಸ್ರಾರು ಮಂದಿ ಇಲ್ಲಿನ ಕಾರ್ಯಕ್ರಮಗಳಿಗೆ ಆಗಮಿಸಿದ್ದಾರೆ. ಹಲವಾರು ಮಂದಿ ಇಲ್ಲಿಗೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ ಆರ್ ಟಿ ಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ. ಈ ವಿಶೇಷ ಬಸ್ ಸೇವೆಯು ಎ.4 ರಿಂದ ಎ.6ರವರೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಬಸ್ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಮಧೂರಿಗೆ ಬೆಳಗ್ಗೆ 10 ಗಂಟೆಗೆ ಮತ್ತು 10.20ಕ್ಕೆ ಹೊರಡಲಿದೆ. ಮಧೂರಿನಿಂದ ಮಂಗಳೂರಿಗೆ 1.30 ಮತ್ತು 1.45ಕ್ಕೆಹೊರಡಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 5 ಶನಿವಾರ ಹಾಗೂ ಏಪ್ರಿಲ್ 6 ಭ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.