ಭಾರತ, ಫೆಬ್ರವರಿ 22 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 23ರ ಭಾನುವಾರದಿಂದ ಮಾರ್ಚ್ 1ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಸಮಯವನ್ನು ವ್ಯರ್ಥ ಮಾಡದೆ ಯಾವುದಾದರೊಂದು ಕೆಲಸದಲ್ಲಿ ತೊಡಗುವಿರಿ. ಆತುರದ ನಿರ್ಧಾರವನ್ನು ತೆಗೆದುಕೊಂಡಲ್ಲಿ ತೊಂದರೆ ಖಂಡಿತ. ನಿಮ್ಮ ಕರ್ತವ್ಯನಿಷ್ಠೆಗೆ ಎಲ್ಲರ ಪ್ರಶಂಸೆ ದೊರೆಯುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಛಲದಿಂದ ಜಯ ಗಳಿಸುವಿರಿ. ವಯಸ್ಸಿನಲ್ಲಿ ಚಿಕ್ಕವರಾದರೂ ದೊಡ್ಡ ದೊಡ್ಡ ಜವಾಬ್ದಾರಿಗಳನ್ನು ನಿರ್ವಹಿಸಬೇಕಾಗುತ್ತದೆ. ಉತ್ತಮ ಆತ್ಮವಿಶ್ವಾಸ ಇರುತ್ತದೆ. ಸದಾ ಎಲ್ಲರಿಗೂ ಉಪಯೋಗವಾಗುವಂತಹ ಕೆಲಸವನ್ನೇ ಮಾಡುವಿರಿ. ...