Mandya, ಮೇ 2 -- ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ...ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು. ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದರು.

ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ "ದೇಹವೇ ದೇಗುಲ" ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು...