ಭಾರತ, ಜೂನ್ 26 -- ಚಾಮರಾಜನಗರ: ಇಲ್ಲಿನ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಸಾವನ್ನಪ್ಪಿವೆ. ತಾಯಿ ಹುಲಿ ಸೇರಿ ನಾಲ್ಕು ಹುಲಿ ಮರಿಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ಯಾ ಎಂಬ ಅನುಮಾನ ಮೂಡಿದ್ದು, ಈ ಘಟನೆ ಸಂಬಂಧ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ಈ ಘಟನೆ ನಡೆದಿದೆ. ಬುಧವಾರದಂದು ಹುಲಿಗಳ ಮೃತದೇಹಗಳು ಅರಣ್ಯ ಇಲಾಖೆಯ ಕಣ್ಣಿಗೆ ಬಿದ್ದಿದ್ದು, ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರಬಹುದೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಚಿವ ಈಶ್ವರ್‌ ಖಂಡ್ರೆ, "ಮಲೆ ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು ತೀವ್ರ ದುಃಖಕರ. PCCF ನೇತೃತ್ವದ ತನಿಖಾ ತಂಡ ರಚಿಸಿ, 3 ದಿನಗಳಲ್ಲಿ ವರದಿ ಕೋರಲಾಗಿದೆ. ನಿರ್ಲಕ್ಷ್ಯವಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿಯೂ ಹುಲಿಗಳು ಸಾವಿಗೀಡಾಗಿದ್ದರೆ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ...