Mm hills, ಫೆಬ್ರವರಿ 26 -- ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಬುಧವಾರ ಮಹಾ ಶಿವರಾತ್ರಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇಗುಲದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ದೇವಾಲಯದ ಸಂಪ್ರದಾಯದಂತೆ ಜರುಗಿತು.

ಬೆಳಿಗ್ಗೆ 6.30ರಿಂದ ರಾತ್ರಿ 8.30ರವರೆಗೆ ಮಾದಪ್ಪನಿಗೆ ವಿವಿಧ ಅಭಿಷೇಕವನ್ನು ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರು ಕೈಗೊಂಡಿದ್ದರು. ದೇವರಿಗೆ ಏಕವಾರು ರುದ್ರಾಭಿಷೇಕ, ಬಿಲ್ವಾರ್ಚನೆ. ಅಷ್ಟೋತ್ತರ ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ ಪೂಜಾ ಕೈಕಂರ್ಯಗಳನ್ನು ನೆರವೇರಿಸಲಾಯಿತು.

ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿ ನಂತರ ಧೂಪ, ದೀಪಧಾರತಿ ಸೇವೆ ಹಾಗೂ ಮಹಾ ಮಂಗಳಾರತಿ ಬೆಳಗಿಸಲಾಯಿತು. ಜತೆಗೆ ದೇಗುಲದಲ್ಲಿ ವಿವಿಧ ಉತ್ಸವಾದಿ ಸೇವೆಗಳು ಸಹ ನಡೆಯಿತು. ರಾತ್ರಿ ಶಿವನ ರೂಪದಲ್ಲಿ ಮಹದೇಶ್ವರರನ್ನು ನೆನೆಯುವ ಸಲುವಾಗಿ ಜಾಗರಣೆ ಉತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ...