Mandya, ಮೇ 23 -- ಮಂಡ್ಯ: ಕಾವೇರಿ ನದಿ ತೀರದ ಮಂಡ್ಯ ಜಿಲ್ಲೆಯಲ್ಲಿ ಮಳೆಗಾಲ ಎದುರಿಸಲು ಸಿದ್ದತೆಗಳು ನಡೆದಿವೆ. ಕಳೆದ ವರ್ಷ ಭಾರೀ ಮಳೆಯಿಂದ ಸಾಕಷ್ಟು ಅನಾಹುತಗಳು ಆಗಿದ್ದವು. ಇದರಿಂದ ಮಂಡ್ಯ ಜಿಲ್ಲಾಡಳಿತ ಈಗಿನಿಂದಲೇ ತಯಾರಿ ಆರಂಭಿಸಿದೆ. ಮಂಡ್ಯ ಜಿಲ್ಲೆಯಲ್ಲಿ ಮುಂದಿನ ವಾರವೇ ಮುಂಗಾರು ಹಂಗಾಮು ಪ್ರಾರಂಭವಾಗಲಿದೆ, ಹವಾಮಾನ ಇಲಾಖೆಯ ವರದಿಯ ಪ್ರಕಾರ ಈ ಬಾರಿ ವಾಡಿಕೆಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ನೀಡಿದ್ದು, ಅಧಿಕಾರಿಗಳು ಯಾವುದೇ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಮತ್ತು ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಿ ಅಧಿಕಾರಿಗಳು ಮಳೆ ಹಾನಿಯಾದ ನಂತರ ಕ್ರಮ ಕೈಗೊಳ್ಳುವುದಲ್ಲ. ಮೊದಲೇ ಕ್ರಮ ಕೈಗೊಂಡರೆ ಬಹಳಷ್ಟು ಹಾನಿ ತಡೆಗಟ್ಟಬಹುದು. ಆದರಿಂದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಬೇಕು.
ಇದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನೀಡಿದ ಕಟ್ಟುನಿಟ್ಟಿನ ಸೂಚನೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.