ಭಾರತ, ಮೇ 20 -- ಮಂಗಳೂರು: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು 20, 21 ರಂದು ರೆಡ್ ಅಲರ್ಟ್, ಮೇ 22 ರಿಂದ 25 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಿಡಿಲು ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಾಯುಭಾರ ಕುಸಿತ ದಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮಳೆ ಹವಾಮಾನ ವರದಿಯಲ್ಲಿ ತಿಳಿಸಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ಉಚಿತ - 1...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.