Bangalore, ಜುಲೈ 24 -- ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ. ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ನನಗೆ ತಿಳಿಸಿದ್ದಾರೆ ಎಂದು ಸಾವಂತ್ ಅವರು ಇಂದು ವಿಧಾನಸಭೆಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ.

ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬ...