ಭಾರತ, ಫೆಬ್ರವರಿ 25 -- ಚಾಮರಾಜನಗರ: ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರದ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ (ಫೆ.25, ಮಂಗಳವಾರ) ದ್ವಿಚಕ್ರ ಹಾಗೂ ತ್ರಿಚಕ್ರ ವಾಹಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಫೆಬ್ರುವರಿ 25ರಿಂದ ಮಾರ್ಚ್ 1ರ ಸಂಜೆ 7 ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿರಲಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಇಂದಿನಿಂದ ಮಾರ್ಚ್ 1ರವರಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಸಹಜವಾಗಿ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ನಿಷೇಧ ವಿಧಿಸಲಾಗಿದೆ. ಕಡಿದಾದ ತಿರುವು, ದಟ್ಟ ಅರಣ್ಯ ಪ್ರದೇಶ ಇರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ತಪ್ಪಿಸಲು ಹಾಗೂ ಅಪಘಾತ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರತಿವರ್ಷ ಮಹಾಶಿವ...
Click here to read full article from source
To read the full article or to get the complete feed from this publication, please
Contact Us.