ಭಾರತ, ಫೆಬ್ರವರಿ 17 -- Mahashivaratri Special: ಪ್ರಾಚೀನ ಭಾರತದ ನಾಣ್ಯಗಳನ್ನು ನೋಡಬೇಕೇ? ಧರ್ಮಸ್ಥಳಕ್ಕೆ ಬನ್ನಿ. ಮಹಾಶಿವರಾತ್ರಿಯಂದು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರು ಮಂಜುನಾಥಸ್ವಾಮಿ ದರ್ಶನದ ಬಳಿಕ ಇಲ್ಲಿರುವ ವಿಶೇಷ ಆಕರ್ಷಣೆಯಾದ ಮಂಜೂಷಾ ವಸ್ತುಸಂಗ್ರಹಾಲಯಕ್ಕೂ ಭೇಟಿ ನೀಡುವುದುಂಟು. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನವನ್ನಿಡಲಾಗಿದೆ.

ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಫೆ.17ರಿಂದ ಮಾ.1ರವರೆಗೆ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನ ನಡೆಯಲಿದೆ. ಅಂದ ಹಾಗೆ, ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ವಿರಳ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ.

ಡಾ. ಹೆಗ್ಗಡೆಯವರ ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ ನಾಣ್ಯಗಳ ಪ್ರದರ್ಶನವನ್ನು ಆಯೋಜಿಸಿದ್ದು ಶಾಲಾ ಮಕ್ಕಳಿಗೆ, ಆಸಕ್ತರಿಗೆ ನಾಣ್ಯಗಳ...