Belagavi, ಫೆಬ್ರವರಿ 7 -- ವಷಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ ಪ್ರವಾಸಕ್ಕೆಂದು ಹೋಗಿದ್ದ ಕರ್ನಾಟಕದ ವಾಹನವೊಂದು ಮಧ್ಯಪ್ರದೇಶದ ಇಂದೋರ್‌ ಬಳಿ ರಸ್ತೆ ಅಪಘಾತಕ್ಕೀಡಾಗಿ ನಾಲ್ವರು ಬೆಳಗಾವಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಇದಲ್ಲದೇ ಬೈಕ್‌ನಲ್ಲಿ ಹೊರಟಿದ್ದ ಇಬ್ಬರೂ ಇದೇ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ಧಾರೆ. ಗಾಯಗೊಂಡಿರುವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಇಂದೋರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳದ ವೇಳೆ ಕಾಲ್ತುಳಿತಕ್ಕೆ ಸಿಲುಕಿ ನಾಲ್ವರು ಮೃತಪಟ್ಟ ದುರ್ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದು ಬೆಳಗಾವಿಯವರೇ ನಾಲ್ವರು ಅಸುನೀಗಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು. ಚಿಕಿತ್ಸೆ ಬಳಿಕ ಬೆಳಗಾವಿಗೆ ಕಳುಹಿಸಲು ಸ್ಥಳೀಯಾಡಳಿತ ಸಿದ್ದತೆ ಮಾಡಿಕೊಂಡಿದೆ. ನಾಲ್ವರ ಮೃತ ದೇಹಗಳನ್ನೂ ಬೆಳಗಾವಿಗೆ ಕಳುಹಿಸಲಾಗುತ್ತಿದೆ.

ಮಧ್ಯಪ್ರದೇಶ ರಾಜ್ಯದ ಇಂದೋರ್‌ ಸಮೀಪದ ಮಾನ್‌ಪುರದಲ್ಲಿ ಬೆಳಗಾವಿ ಮೂಲದ ಯಾತ್ರ...