ಭಾರತ, ಮಾರ್ಚ್ 2 -- ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದಾದ ಮಹಾ ಕುಂಭಮೇಳಕ್ಕೆ ಆತಿಥ್ಯ ವಹಿಸಿದ್ದ ಪ್ರಯಾಗ್‌ರಾಜ್, ಈಗ ಸಹಜ ಸ್ಥಿತಿಗೆ ಮರಳುವ ಪ್ರಕ್ರಿಯೆಯಲ್ಲಿದೆ. ಫೆ. 26ರಂದು ಮಹಾ ಕುಂಭಮೇಳ ಮುಗಿದ ನಂತರ 15 ದಿನಗಳ ವಿಶೇಷ ಸ್ವಚ್ಛತಾ ಅಭಿಯಾನ ಆರಂಭಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

ಮಹಾ ಕುಂಭಮೇಳ ಮುಗಿದ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಚ್ಛತಾ ಕಾರ್ಮಿಕರ ಸೇವೆಯನ್ನು ಶ್ಲಾಘಿಸಿದ್ದಾರೆ. ಕುಂಭಮೇಳ ಮೈದಾನವನ್ನು ಸ್ವಚ್ಛಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಶೇಷ ಅಧಿಕಾರಿ ಆಕಾಂಕ್ಷಾ ರಾಣಾ ಅವರ ನೇತೃತ್ವದಲ್ಲಿ ಸ್ವಚ್ಛತಾ ಮಿತ್ರರು ಮತ್ತು ಗಂಗಾ ಸೇವಾ ರಾಯಭಾರಿಗಳು ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಂದಿನ 15 ದಿನಗಳಲ್ಲಿ ಸಂಗಮ್ ಘಾಟ್‌ಗಳು (ಸ್ನಾನಘಟ್ಟಗಳು), ಕುಂಭಮೇಳ ಮೈದಾನದ ರಸ್ತೆಗಳು, ಶಾಶ್ವತ ಮತ್ತು ತಾತ್ಕಾಲಿಕ ಮೂಲಸೌಕರ್ಯಗಳನ್ನು ಸ್ವಚ್ಛಗೊಳಿಸಲಾಗುವುದು ಎಂದು ವಿಶೇಷ ...