ಭಾರತ, ಜನವರಿ 29 -- ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ, ಈವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಮಹಾ ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ. ಬುಧವಾರ (ಜ.29) ಈ ಕುರಿತು ಮಾತನಾಡಿದ ಅವರು, ಘಟನೆಯಲ್ಲಿ 60 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಮೃತಪಟ್ಟವರಲ್ಲಿ 25 ಜನರನ್ನು ಈಗಾಗಲೇ ಗುರುತಿಸಲಾಗಿದ್ದು, ಉಳಿದ 5 ಜನರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ದುರಂತದಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದಾರೆ.

ಕಾಲ್ತುಳಿತದಿಂದ ಗಾಯಗೊಂಡವರಲ್ಲಿ 36 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರನ್ನು ಅವರ ಕುಟುಂಬಗಳೊಂದಿಗೆ ಕಳುಹಿಸಲಾಗಿದೆ ಎಂದು ಡಿಐಜಿ ಹೇಳಿದ್ದಾರೆ.

"ಜನಸಮೂಹದ ನೂಕುನುಗ್ಗಲಿನಿಂದ ಈ ಘಟನೆ ಸಂಭವಿಸಿದೆ. ಜನಸಮೂಹ ಬ್ಯಾರಿಕೇಡ್‌ಗಳನ್ನು ಮುರಿದು ಇನ್ನೊಂದು ಬದಿಗೆ ಹೋಗಲು ಮುಂದಾಗಿದ್ದಾರೆ. 90ಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ...