ಭಾರತ, ಜನವರಿ 29 -- ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ, ಈವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಮಹಾ ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ. ಬುಧವಾರ (ಜ.29) ಈ ಕುರಿತು ಮಾತನಾಡಿದ ಅವರು, ಘಟನೆಯಲ್ಲಿ 60 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಮೃತಪಟ್ಟವರಲ್ಲಿ 25 ಜನರನ್ನು ಈಗಾಗಲೇ ಗುರುತಿಸಲಾಗಿದ್ದು, ಉಳಿದ 5 ಜನರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ದುರಂತದಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದಾರೆ.
ಕಾಲ್ತುಳಿತದಿಂದ ಗಾಯಗೊಂಡವರಲ್ಲಿ 36 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರನ್ನು ಅವರ ಕುಟುಂಬಗಳೊಂದಿಗೆ ಕಳುಹಿಸಲಾಗಿದೆ ಎಂದು ಡಿಐಜಿ ಹೇಳಿದ್ದಾರೆ.
"ಜನಸಮೂಹದ ನೂಕುನುಗ್ಗಲಿನಿಂದ ಈ ಘಟನೆ ಸಂಭವಿಸಿದೆ. ಜನಸಮೂಹ ಬ್ಯಾರಿಕೇಡ್ಗಳನ್ನು ಮುರಿದು ಇನ್ನೊಂದು ಬದಿಗೆ ಹೋಗಲು ಮುಂದಾಗಿದ್ದಾರೆ. 90ಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.