ಭಾರತ, ಜನವರಿ 29 -- ಬೆಳಗಾವಿ: ಪ್ರಯಾಗ್‌​ರಾಜ್‌​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಗಂಭೀರವಾಗಿ ಗಾಯಗೊಂಡಿದ್ದ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ತಾಯಿ ಮತ್ತು ಮಗಳು ಮಾತ್ರವಲ್ಲದೆ, ಮತ್ತೊಬ್ಬರು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಅವರ ಮಗಳು ಮೇಘಾ ಹತ್ತರವಾಠ (18) ನಿಧನರಾಗಿದ್ದಾರೆ. ಅಲ್ಲದೆ ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಹಾಗೂ ಶಿವಾಜಿ ನಗರದ ನಿವಾಸಿ ಮಹಾದೇವಿ ಕೂಡಾ ಸಾವನ್ನಪ್ಪಿದ್ದಾರೆ. ಪ್ರಯಾಗ್‌ರಾಜ್‌ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಬೆಳಗಾವಿಯವರ ಸಂಖ್ಯೆ ನಾಲ್ಕಕ್ಕೇರಿದೆ.

ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪವಿತ್ರ ಸ್ನಾನಕ್ಕಾಗಿ ಯಾತ್ರಿಕರ ಸಂಖ್ಯೆ ಹೆಚ್ಚಾಗಿತ್ತು. ಪವಿತ್ರ ಸ್ನಾನಕ್ಕಾಗಿ ಭಕ್ತರ ಸಂಖ್ಯೆ ಹೆಚ್ಚಿದ ಕಾರಣ ನೂಕು-ನುಗ್ಗಲು ಉಂಟಾಗಿ ಕಾಲ್ತುಳಿತ ನಡೆದಿತ್ತು.

ಬೆಳಗಾವಿಯಲ್ಲಿರುವ ಜ್ಯ...