ಭಾರತ, ಏಪ್ರಿಲ್ 8 -- ಬೆಂಗಳೂರು, (ಏಪ್ರಿಲ್ 8):-ಸುದ್ದಗುಂಟೆಪಾಳ್ಯ‌ ಘಟನೆಗೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಿರ್ಭಯಾ ಯೋಜನೆ ಸೇರಿದಂತೆ ಮಹಿಳಾ ಸುರಕ್ಷತೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇನೆ. ದೇಶದಲ್ಲಿ ಬೇರೆ ರಾಜ್ಯಗಳಿಗಿಂತ ನಿರ್ಭಯಾ ಯೋಜನೆಯ ಅನುದಾನವನ್ನು ಹೆಚ್ಚು ಬಳಸಿಕೊಂಡು, ಅನುಷ್ಟಾನ ಮಾಡಿದ್ದೇವೆ. ನಾನು ಪ್ರತಿ ಬಾರಿ ಗೃಹ ಸಚಿವನಾದಾಗ ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಮಹಿಳಾ ಸುರಕ್ಷತೆಗೆ ಏನೆಲ್ಲ ಕ್ರಮ ಕೈಗೊಂಡಿದ್ದೇನೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಒಂದು ಹೇಳಿಕೆಯನ್ನು ತಿರುಚಿ, ನನ್ನ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ. ನಾನು ಮಹಿಳೆಯರ ರಕ್ಷಣೆಗೆ ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊ...