Bengaluru, ಮಾರ್ಚ್ 19 -- ಮಾಘ ನಕ್ಷತ್ರದ ಯುಗಾದಿ ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ಇನ್ನೂ ನಿಖರವಾಗಿ ಬೇಕು ಎಂದುಕೊಳ್ಳುವವರು ನಕ್ಷತ್ರವಾರು ವರ್ಷ ಭವಿಷ್ಯ ನೋಡಿ ಕೊಂಚ ಸಮಾಧಾನ ಮಾಡಿಕೊಳ್ಳುತ್ತಾರೆ. ಅಂತಹ ಓದುಗರಿಗಾಗಿ 27 ನಕ್ಷತ್ರಗಳ ವರ್ಷ ಭವಿಷ್ಯವನ್ನು ಸರಣಿ ಪ್ರಕಾರ 'ಎಚ್‌ಟಿ ಕನ್ನಡ' ಒದುಗಿಸುತ್ತಿದೆ. ನಕ್ಷತ್ರಗಳ ಪೈಕಿ ಹತ್ತನೇಯದಾದ ಮಾಘ ಅಥವಾ ಮಖ ನಕ್ಷತ್ರದಲ್ಲಿ ಜನಿಸಿದವರ ಶ್ರೀ ವಿಶ್ವಾವಸು ಸಂವತ್ಸರದ ವರ್ಷ ಭವಿಷ್ಯ ಇಲ್ಲಿದೆ.

ಪ್ರತಿಯೊಂದು ನಕ್ಷತ್ರವೂ ನಾಲ್ಕು ಪಾದಗಳನ್ನು ಹೊಂದಿರುತ್ತವೆ. ಮಖ ಅ...