Bangalore, ಫೆಬ್ರವರಿ 6 -- ಬೆಂಗಳೂರು: ಭಾರತೀಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ( ಎಸ್‌ಬಿಐ) ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ಸಹಿತ ನಾಲ್ವರ ವಿರುದ್ದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ ಶೆಟ್ಟಿ ಸಹಿತ ನಾಲ್ವರೂ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಶುಕ್ರವಾರದಂದು ನ್ಯಾಯಾಲಯ ಅಂತಿಮ ತೀರ್ಪನ್ನು ಜನಪ್ರತಿನಿಧೊಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ಪ್ರಕಟಿಸುವ ನಿರೀಕ್ಷೆಯಿದೆ. ತಕ್ಷಣವೇ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸಿಬಿಐಗೆ ನ್ಯಾಯಾಧೀಶರು ಸೂಚನೆ ನೀಡಿದ್ದು. ಎಲ್ಲರಿಗೂ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ.

Published by HT Digital Content Services with permission from HT Kannada....