Chamarajnagar, ಏಪ್ರಿಲ್ 24 -- ಮಲೆ ಮಹದೇಶ್ವರ ಬೆಟ್ಟ ಕಾವೇರಿ ವನ್ಯಜೀವಿ ಧಾಮ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ ಮಾನವ- ವನ್ಯಜೀವಿ ಸಂಘರ್ಷ ತಡೆಗೆ ಆನೆ ಕಂದಕ, ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು 157 ಕೋಟಿ ರೂ. ಹೆಚ್ಚುವರಿಯಾಗಿ ನೀಡಲು ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇದರಲ್ಲಿ 88 ಕಿ.ಮೀ. ರೈಲ್ವೆ ಬ್ಯಾರಿಕೇಡ್, 53 ಕಿ.ಮೀ. ಆನೆ ಕಂದಕ, 50 ಕಿ.ಮೀ. ಸೌರ ತೂಗು ಬೇಲಿ (ಸೋಲಾರ್ ಟೆಂಟಕಲ್ ಫೆನ್ಸಿಂಗ್) ನಿರ್ಮಾಣಕ್ಕೆ ಈ ಹೆಚ್ಚಿನ ಅನುದಾನ ಮಂಜೂರು ಮಾಡಲಾಗಿದೆ . ಸಂಪುಟ ಸಭೆ ಬಳಿಕ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಇಲಾಖೆ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಈ ವಿಷಯ ತಿಳಿಸಿದ್ದಾರೆ.

ಮಾನವ ವನ್ಯಜೀವಿ ಅದರಲ್ಲೂ ಆನೆಗಳಿಂದ ಬೆಳೆಹಾನಿ, ಜೀವಹಾನಿ ಹೆಚ್ಚಾಗುತ್ತಿದ್ದು, ಇದರ...