ಭಾರತ, ಏಪ್ರಿಲ್ 11 -- Mark Shankar Health Update: ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಟ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್ ಪವನೋವಿಚ್ ಗಾಯಗೊಂಡಿದ್ದರು. ಪವನ್ ಕಲ್ಯಾಣ ಪುತ್ರ ಬೇಗ ಚೇತರಿಸಿಕೊಳ್ಳಲಿ ಎಂದು ಜೂನಿಯರ್ ಎನ್‌ಟಿಆರ್‌ ಸೇರಿದಂತೆ ಹಲವರು ಪ್ರಾರ್ಥಿಸಿದ್ದರು, ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿದ್ದರು. ಪವನ್ ಕಲ್ಯಾಣ್ ಕೂಡ ತಮ್ಮ ಮಗನ ಆರೋಗ್ಯದ ಬಗ್ಗೆ ಎರಡು ದಿನದ ಹಿಂದೆ ಅಪ್‌ಡೇಟ್ ಹಂಚಿಕೊಂಡಿದ್ದರು.

ಇದೀಗ ನಟ ಹಾಗೂ ಪವನ್ ಕಲ್ಯಾಣ್ ಸಹೋದರ್ ಚಿರಂಜೀವಿ ಎಕ್ಸ್‌ನಲ್ಲಿ ಮಾರ್ಕ್ ಶಂಕರ್ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಕ್‌ ಶಂಕರ್ ಮನೆಗೆ ಬಂದಿದ್ದಾನೆ, ಅಲ್ಲದೇ ಅವನು ಬೇಗ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ತೆಲುಗಿನಲ್ಲಿ ಟ್ವೀಟ್ ಮಾಡಿರುವ ಚಿರಂಜೀವಿ 'ನಮ್ಮ ಮಗು ಮಾರ್ಕ್ ಶಂಕರ್ ಮನೆಗೆ ಬಂದಿದ್ದಾನೆ. ಆದರೆ ಅವನು ಇನ್ನಷ್ಟು ಚೇತರಿಸಿಕೊಳ್ಳಬೇಕಾಗಿದೆ. ನಮ್ಮ ಕುಲದೇವತೆ ಆಂಜನೇಯ ಸ...