ಭಾರತ, ಫೆಬ್ರವರಿ 20 -- ಮಾರ್ಚ್ ಮಾಸ ಭವಿಷ್ಯ 2025: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಇದು ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಶುರುಮಾಡುವ ಮೊದಲು 'ದಿನ ಭವಿಷ್ಯ' ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 2025ರ ಮಾರ್ಚ್‌ ತಿಂಗಳಲ್ಲಿ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಮಾಸ ಭವಿಷ್ಯ ಇಲ್ಲಿದೆ.

ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಮನದಲ್ಲಿ ಮಾಡುವ ಕೆಲಸಗಳೆಲ್ಲವೂ ಸರಿ ಎಂಬ ಭಾವನೆ ಕಂಡುಬರಬಹುದು. ಕುಟುಂಬದ ಖರ್ಚು ವೆಚ್ಚಗಳು ಹೆಚ್ಚ...