ಭಾರತ, ಫೆಬ್ರವರಿ 26 -- ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಪಾದಾರ್ಪಣೆ ಮಾಡಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು ತೆರೆಗೆ ಬರಲಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟರಾದ ಡಾರ್ಲಿಂಗ್ ಕೃಷ್ಣ, ಲೂಸ್ ಮಾದಯೋಗಿ, ಸಾಹಸ ನಿರ್ದೇಶಕರ ಥ್ರಿಲರ್ ಮಂಜು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಮಾತನಾಡಿ, ಟೈಟಲ್ ತುಂಬಾ ಇಷ್ಟವಾಯ್ತು. 'ಕ' ಡಿಸೈನ್ ಮಾಡಿರುವ ರೀತಿ ತುಂಬಾ ಚೆನ್ನಾಗಿದೆ. ಮಂಜೇಶ್ ಅವರಿಗೆ ಒಳ್ಳೆಯದಾಗಲಿ. ಇದು ಅವರ ಎರಡನೇ ಚಿತ್ರ. ಇನ್ನೂ ಹೆಚ್ಚು ಒಳ್ಳೆ ಸಿನಿಮಾ ಮಾಡಲಿ. ನಿರ್ಮಾಪಕರಿಗೂ ಕೂಡ ಒಳ್ಳೆದಾಗಲಿ. ಸಂತು ಲೀಡ್ ಆಕ್ಟಿಂಗ್ ಮಾಡಿದ್ದಾರೆ. ಇದು ದೊಡ್ಡ ಜವಾಬ್ದಾರಿ. ಸಿನಿಮಾ ನಿಲ್ಲಿಸುವುದು ಕಷ್ಟದ ಕೆಲಸ. ಮಾರ್ಚ್ 7ಕ್ಕೆ ಸಿನಿಮಾ ತೆರೆಗೆ ಬರ...