ಭಾರತ, ಮೇ 2 -- ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ ನಟ ಶಿವರಾಜ್ಕುಮಾರ್. ಕನ್ನಡದ ಜತೆಗೆ ಪರಭಾಷೆಯ ಸಿನಿಮಾಗಳಲ್ಲಿಯೂ ಅವರು ನಟಿಸುತ್ತಿದ್ದಾರೆ. ಈಗಾಗಲೇ ಒಂದಷ್ಟು ಸಿನಿಮಾ ಕೆಲಸ ಮುಗಿಸಿರುವ ಶಿವಣ್ಣ, ಇಂದು ತಮ್ಮ ಹೊಸ ಸಿನಿಮಾ ʻಎ ಫಾರ್ ಆನಂದ್ ʼ ಚಿತ್ರದ ಮುಹೂರ್ತ ಮುಗಿಸಿಕೊಂಡಿದ್ದಾರೆ. ವಿಶೇಷ ಏನೆಂದರೆ, ವೇದ, ಭೈರತಿ ರಣಗಲ್ ಬಳಿಕ ತಮ್ಮದೇ ಹೋಮ್ ಬ್ಯಾನರ್ ಗೀತಾ ಆರ್ಟ್ಸ್ ಮೂಲಕ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಗೀತಾ ಶಿವರಾಜ್ಕುಮಾರ್ ಈ ಸಿನಿಮಾದ ನಿರ್ಮಾಪಕರು.
ನಟ ಶಿವರಾಜ್ಕುಮಾರ್ ಇದೀಗ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ 'ಎ ಫಾರ್ ಆನಂದ್' ಚಿತ್ರದ ಮುಹೂರ್ತ ಇಂದು (ಮೇ 2) ಅದ್ಧೂರಿಯಾಗಿ ನೆರವೇರಿದೆ. ಶುಭ ಶುಕ್ರವಾರವಾದ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ಕೊಡಿಸಿದರು.
ಇದನ್ನೂ ಓದಿ: ಟಿಆರ್ಪಿಯಲ್ಲಿ ಅಗ್ರಸ್ಥಾನಕ್ಕೆ ಪೈಪೋಟಿ ಹೆಚ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.