ಭಾರತ, ಮಾರ್ಚ್ 21 -- ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ, ಕನ್ನಡಿಗರಿಗೆ ಉದ್ಯೋಗ ಕಾಯ್ದೆ, ನೀರಾವರಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಕನ್ನಡ ಒಕ್ಕೂಟ ಮಾರ್ಚ್ 22 ರಂದು (ನಾಳೆ) ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಮಾಡುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಬಂದ್‌ಗೆ ಕರೆ ನೀಡಿದ ಕನ್ನಡ ಪರ ಸಂಘಟನೆ ನಾಯಕ ವಾಟಾಳ್ ನಾಗರಾಜ್ ಅವರಿಗೂ ಸರ್ಕಾರದ ಸಂದೇಶ ರವಾನೆಯಾಗಿದೆ. ಈ ಕರ್ನಾಟಕ ಬಂದ್ ಅನ್ನು ಎಲ್ಲ ಕನ್ನಡ ಪರ ಸಂಘಟನೆಗಳು ಬೆಂಬಲಿಸಿಲ್ಲ. ಕೆಲವು ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ, ಪ್ರವೀಣ್ ಶೆಟ್ಟಿ ಬಣಗಳು ಈ ಒಕ್ಕೂಟದ ಜತೆಗೆ ನಿಂತಿಲ್ಲ. ಈ ನಡುವೆ, ಬಂದ್ ಮಾಡಿಯೇ ಮಾಡುತ್ತೇವೆ. ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ನಡೆಯಲಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದು, ಸರ್ಕಾರ ಅವಕಾಶ ಇಲ್ಲ ಎಂದಿರುವ ಕಾರಣ ಏನಾಗಬಹುದು ಎಂಬ ಕುತೂಹಲ, ಗೊಂದಲ ಜನರಲ್ಲಿದೆ....