ಭಾರತ, ಏಪ್ರಿಲ್ 12 -- ಬೆಂಗಳೂರು: ಹಿಂದುಳಿದವರ ಮೀಸಲಾತಿ ಪ್ರಮಾಣ ಶೇ 32ರಿಂದ ಶೇ 51ಕ್ಕೆ ಏರಿಕೆ ಮಾಡುವಂತೆ ಕೆ. ಜಯಪ‍್ರಕಾಶ್ ಹೆಗ್ಡೆ ಅಧ್ಯಕ್ಷತೆಯ ಆಯೋಗ ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದರಂತೆ, ಲಿಂಗಾಯತರು, ಒಕ್ಕಲಿಗರು, ಮುಸ್ಲಿಮರು, ಹಿಂದುಳಿದ ತಳ ಸಮುದಾಯಗಳೂ ಸೇರಿ ಇತರೆ ಹಿಂದುಳಿದ ಜಾತಿಗಳ (ಒಬಿಸಿ) ಪಟ್ಟಿಯಲ್ಲಿರುವ ವಿವಿಧ ಜಾತಿಗಳ ಮೀಸಲಾತಿಯನ್ನು ಮರುವರ್ಗೀಕರಣ ಮಾಡಿ, ಆಯಾ ಜಾತಿಯವರ ಜನಸಂಖ್ಯೆಗೆ ಅನುಗುಣವಾಗಿ ಈಗಿರುವ ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ಆಯೋಗ ವಿವರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ (ಏಪ್ರಿಲ್ 11) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆ. ಜಯಪ‍್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು 2024ರ ಫೆಬ್ರವರಿಯಲ್ಲಿ ಸಲ್ಲಿಸಿದ್ದ '2015ರ ದತ್ತಾಂಶಗಳ ಅಧ್ಯಯನ ವರದಿ 2024'ರ ಶಿಫಾರಸು ಹಾಗೂ ಮುಖ್ಯಾಂಶಗಳ ಮಂಡನೆಯಾಗಿದೆ.

ಕರ್ನಾಟಕದ 6.35 ಕೋಟಿ ಜನಸಂಖ್ಯೆ ಪೈಕಿ 5.98 ಕೋಟಿ ಜನ ಭಾಗಿಯಾಗಿರುವ ಸಮೀಕ್ಷೆಯ ದತ್ತಾಂಶ ಆಧರಿಸಿ '2015ರ ದತ್ತಾಂಶಗಳ ಅಧ್ಯಯ...