Madikeri, ಮೇ 11 -- ಮಡಿಕೇರಿ: ಮುಂಗಾರು 2025 ಈ ಬಾರಿ ನಾಲ್ಕೈದು ದಿನ ಮೊದಲೇ ಕೇರಳ ಪ್ರವೇಶಿಸುವ ಮುನ್ಸೂಚನೆ ದೊರೆತಿದೆ. ಕೇರಳಕ್ಕೆ ಹೊಂದಿಕೊಂಡಂತೆ ಇರುವ ಕರ್ನಾಟಕದ ಕೊಡಗಿನಲ್ಲಿ ಮುಂಗಾರು ಎದುರಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.ಕೊಡಗು ಜಿಲ್ಲಾಡಳಿತವು ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್‍ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇಲ್ಲದೇ ಮುಂಗಾರು ಮಳೆಯ ವೇಳೆ ಅನಾಹುತಗಳಾದರೆ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ( ಸೆಸ್ಕ್‌) ಸಹಾಯವಾಣಿಯನ್ನು ಆರಂಭಿಸಿದೆ. ದೂರಿನ ಜತೆಗೆ ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ ಎಂದು ತಿಳಿಸಲಾಗಿದೆ.

ಕೊಡಗು ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 'ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ'ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ,ಜಿಲ್ಲೆಯಲ್ಲಿ ಜೂನ್...