Mysuru, ಮೇ 24 -- ಮೈಸೂರು:ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು. ಬಸವಣ್ಣನವರ ಚಿಂತನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.