ಭಾರತ, ಮೇ 10 -- ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 13ರಂದು ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತ ರಾಜ್ಯದಾದ್ಯಂತ ವರುಣಾಗಮನವಾಗುವ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಮಾತ್ರವಲ್ಲದೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ನಾಳೆ (ಮೇ 11ರ ಭಾನುವಾರ) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅತ್ತ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.