Bengaluru, ಮೇ 10 -- ನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆ ಮುಂದುವರಿದಿದ್ದು, ಪಾಕಿಸ್ತಾನದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮುಂದುವರಿಸಿದೆ. ತನ್ನ ಮೂರು ವಾಯುನೆಲೆಗಳನ್ನು ಭಾರತೀಯ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು ಪಾಕಿಸ್ತಾನ ಶನಿವಾರ ಮುಂಜಾನೆ ಹೇಳಿಕೊಂಡಿದೆ. ಪಾಕಿಸ್ತಾನ ವಾಯುಪಡೆಯ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿದ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಪಾಕಿಸ್ತಾನ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಚೌಧರಿ ಇಸ್ಲಾಮಾಬಾದ್‌ನಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ದಾಳಿ ಕುರಿತಂತೆ ಹೆಚ್ಚಿನ ವಿವರಗಳನ್ನು ಪಾಕ್ ಸೇನೆ ಬಿಡುಗಡೆ ಮಾಡಿಲ್ಲ. ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಇರುವ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ ರಾಜಧಾನಿ ಇಸ್ಲಾಮಾಬಾದ್‌ನಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿದೆ. ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.