ಭಾರತ, ಮಾರ್ಚ್ 29 -- ಐಪಿಎಲ್‌ 18ನೇ ಆವೃತ್ತಿಯಲ್ಲಿ ಮಾಜಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ ಸತತ ಎರಡನೇ ಸೋಲು ಕಂಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಡೆದ ರೋಚಕ ಪಂದ್ಯದಲ್ಲಿ ಎಂಐ ವಿರುದ್ಧ ಆತಿಥೇಯ ಗುಜರಾತ್‌ ಟೈಟನ್ಸ್ 36 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಅಂಕಗಳ ಖಾತೆ ತೆರೆದಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟನ್ಸ್‌, ಸಾಯಿ ಸುದರ್ಶನ್ ಆಕರ್ಷಕ ಅರ್ಧಶತಕದ ನೆರವಿಂದ 196 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಮುಂಬೈ ಇಂಡಿಯನ್ಸ್‌ 160 ರನ್‌ ಗಳಿಸಲಷ್ಟೇ ಶಕ್ತವಾಯ್ತು.

ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ಗೆ ಉತ್ತಮ ಆರಂಭ ಸಿಕ್ಕಿತು. ಜವಾಬ್ದಾರಿಯುತ ಆಟವಾಡಿದ ನಾಯಕ ಶುಭ್ಮನ್‌ ಗಿಲ್‌ ಮತ್ತು ಸಾಯಿ ಸುದರ್ಶನ್‌, ಮೊದಲ ವಿಕೆಟ್‌ಗೆ 78 ರನ್‌ಗಳ ಜೊತೆಯಾಟವಾಡಿದರು. 38 ರನ್‌ ಗಳಿಸಿದ್ದ ಗಿಲ್‌ ಮೊದಲನೆಯವರಾಗಿ ಔಟಾದರು. ಈ ವೇಳೆ ಸಾಯಿ ಜೊತೆಗೂಡಿದ ಬಟ್ಲರ್ ಅರ್ಧಶತಕದ ಜೊತೆಯಾಟದಲ್ಲಿ ಭಾಗಿಯಾದರ...