ಭಾರತ, ಮೇ 27 -- ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ಪರ ಒಂದು ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ನಿರ್ಮಿಸಿದ್ದಾರೆ. ಸೂರ್ಯ ಪ್ರಸಕ್ತ ಋತುವಿನಲ್ಲಿ 14 ಇನ್ನಿಂಗ್ಸ್​ಗಳಲ್ಲಿ 640 ರನ್ ಕಲೆ ಹಾಕುವುದರೊಂದಿಗೆ ಸಚಿನ್ ತೆಂಡೂಲ್ಕರ್ ಅವರ 15 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ. 2025ರ ಐಪಿಎಲ್​​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 3ನೇ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಋತುವಿನಲ್ಲಿ ಸೂರ್ಯ 5 ಅರ್ಧಶತಕ ಸಿಡಿಸಿದ್ದಾರೆ.

2010ರಲ್ಲಿ ಮುಂಬೈ ಇಂಡಿಯನ್ಸ್ ಪರ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಅವರು ಒಂದೇ ಆವೃತ್ತಿಯಲ್ಲಿ 618 ರನ್ ಗಳಿಸಿದ್ದರು. ಮುಂಬೈ ಇಂಡಿಯನ್ಸ್​​ನ ಮಾಜಿ ಬ್ಯಾಟರ್​ ಸಚಿನ್ ಅವರ ಈ ದಾಖಲೆ ಇದೀಗ ಬ್ರೇಕ್ ಆಗಿದೆ. ಮುಂಬೈ ಪರ ಸೂರ್ಯ 640 ರನ್ ಗಳಿಸಿ ಈ ದಾಖಲೆ ಅಳಿಸಿದ್ದಾರೆ.

ಐಪಿಎಲ್ 2025ರಲ್ಲಿ ಸೂರ್ಯ ಮುಂಬೈ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೂರ್ಯ 640 ರನ್ ಸ...