ಭಾರತ, ಮೇ 27 -- ಸೂರ್ಯಕುಮಾರ್ ಯಾದವ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಋತುವಿನಲ್ಲಿ ಅವರು 14 ಪಂದ್ಯಗಳಲ್ಲಿ 32 ಸಿಕ್ಸರ್ ಬಾರಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಅರ್ಧಶತಕದ ಇನ್ನಿಂಗ್ಸ್ನಲ್ಲಿ ಸೂರ್ಯ ಈ ದಾಖಲೆ ನಿರ್ಮಿಸಿದ್ದಾರೆ. ಜೈಪುರ ಮೈದಾನದಲ್ಲಿ ಅವರು 39 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ಗಳೊಂದಿಗೆ 57 ರನ್ ಗಳಿಸಿದರು.
ಸನತ್ ಜಯಸೂರ್ಯ ಅವರ 17 ವರ್ಷಗಳ ಹಿಂದಿನ ದಾಖಲೆಯನ್ನು ಸೂರ್ಯ ಮುರಿದಿದ್ದಾರೆ. ಶ್ರೀಲಂಕಾದ ಮಾಜಿ ಲೆಜೆಂಡ್ ಜಯಸೂರ್ಯ 2008ರ ಐಪಿಎಲ್ ಉದ್ಘಾಟನಾ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ಪರ 31 ಸಿಕ್ಸರ್ಗಳನ್ನು ಬಾರಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ಇದೀಗ ಈ ಒಂದು ಸೀಸನ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾಗಿದ್ದಾರೆ.
ಇಶಾನ್ ಕಿಶನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಐಪಿಎಲ್ 2020...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.