Bengaluru, ಮೇ 19 -- ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ್ದು, 3ನೇ ವರ್ಷಕ್ಕೆ ಕಾಲಿಡಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಮೇ 20ರ ಮಂಗಳವಾರ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ದತೆಗಳು ಭರದಿಂದ ನಡೆದಿದ್ದು, ಈ ಸಮಾವೇಶಕ್ಕೆ ಸಮರ್ಪಣೆ, ಸಂಕಲ್ಪ ಸಮಾವೇಶ ಎಂದು ಕರೆಯಲಾಗಿದೆ. ಸಾಧನಾ ಸಮಾವೇಶದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್‌ನ ಶಾಸಕರು, ಸಂಸದರು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್‌ನ ಸಾಧನಾ ಸಮಾವೇಶಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 4 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದ್ದು, ರಾಜ್ಯದ ವಿವಿಧ ಗ್ಯಾರಂಟಿ ಯೋಜನೆಯ 1 ಲಕ್ಷ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.