ಭಾರತ, ಮಾರ್ಚ್ 7 -- ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ ಇಸಿಐಆರ್ ಅನ್ನು (ಎನ್‌ಫೋರ್ಸ್‌ಮೆಂಟ್‌ ಕೇಸ್‌ ಇನ್‌ಫಾರ್ಮೇಶನ್‌ ರಿಪೋರ್ಟ್‌) ಹೈಕೋರ್ಟ್ ರದ್ದುಗೊಳಿಸಿದೆ. ಇಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಬಜೆಟ್‌ ಮಂಡಿಸಿ ಒಂದು ನಿರಾಳತೆ ಹೊಂದಿದ್ದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ರೀತಿಯ ರಿಲೀಫ್‌ ಸಿಕ್ಕಂತಾಗಿದೆ. ಅವರ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಿರಾಳಾಗಿದ್ದಾರೆ.

ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿರುವುದನ್ನು ಹಾಗೂ ಇಸಿಐಆರ್ ದಾಖಲಿಸಿರುವುದನ್ನು ರದ್ದುಗೊಳಿಸಬೇಕು ಎಂದು ಕೋರಿ ಪಾರ್ವತಿ ಮತ್ತು ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂ...