ಭಾರತ, ಏಪ್ರಿಲ್ 15 -- MUDA Case: ಮುಡಾ ಸೈಟ್ ಹಂಚಿಕೆ ಅಕ್ರಮ ಸಂಬಂಧಿಸಿದ ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ವಿಶೇಷ ಕೋರ್ಟ್‌ ಆದೇಶಿಸಿದೆ. ಮುಡಾ ಕೇಸ್‌ನಲ್ಲಿ ಲೋಕಾಯುಕ್ತ ಪೊಲೀಸರು ಮಧ್ಯಂತರ ತನಿಖಾ ವರದಿ ಆಧರಿಸಿ ನೀಡಿದ ಬಿ ರಿಪೋರ್ಟ್ ಕುರಿತು ಇಡಿ ಕೂಡ ತಕರಾರು ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ ಎಂದು ವಿಶೇಷ ಕೋರ್ಟ್‌ ಮಂಗಳವಾರ (ಏಪ್ರಿಲ್ 15) ಹೇಳಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿದ್ದ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ.

ಲೋಕಾಯುಕ್ತ ಪೊಲೀಸರು ಮಧ್ಯಂತರ ವರದಿ ಸಲ್ಲಿಸಿರುವ ಕಾರಣ ಬಿ ರಿಪೋರ್ಟ್‌ ಬಗ್ಗೆ ತಕರಾರು ಅರ್ಜಿ ಸಲ್ಲಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೂ ವಿಶೇಷ ನ್ಯಾಯಾಲಯ ಅವಕಾಶ ನೀಡಿದೆ. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ತಕರಾರು ಅರ್ಜಿಯ ಜತೆಗೆ ಜಾರಿ ನಿರ್ದೇಶನಾಲಯ ಸಲ್ಲಿಸಿದ ತಕರಾರು ಅರ್ಜಿಯನ್ನೂ ವಿಶೇಷ ಕೋರ್ಟ್ ಪರಿಗಣಿಸಿದೆ.

ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ, ಪೂರ್ಣ...